ಬೆಂಗಳೂರು, ಡಿ.24 (DaijiworldNews/MB) : ಕೊರೊನಾ ಹಿನ್ನೆಲೆ ಇಂದಿನಿಂದ ಜ, 2ರವರೆಗೆ ವಿಧಿಸಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ರಾತ್ರಿ ಕರ್ಫ್ಯೂ ಆದೇಶದ ವಿರುದ್ದ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು. ಹಗಲಿನಲ್ಲಿ ಕೊರೊನಾ ಹರಡುವುದಿಲ್ಲವೇ ಎಂದು ಹಲವು ನಾಯಕರು ಹಾಗೂ ಸಾಮಾಜಿಕ ಜಾಲತಾಣದ ಮೂಲಕ ಜನರು ಪ್ರಶ್ನಿಸಿದ್ದರು.
ಬುಧವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾತ್ರಿ ಕರ್ಫ್ಯೂ ಜಾರಿ ಘೋಷಿಸಿದ್ದರು.
ರಾತ್ರಿ ಕರ್ಫ್ಯೂ ಅಗತ್ಯವಿಲ್ಲವೆಂದು ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದ ಮುಖ್ಯಮಂತ್ರಿ ರಾತ್ರಿ ಕರ್ಫ್ಯೂ ನಿರ್ಧಾರ ವಾಪಾಸ್ ಪಡೆದಿದ್ದಾರೆ.
''ಹಾಗೆಯೇ ಜನರು ಸ್ವಯಂ ನಿರ್ಭಂಧ ವಿಧಿಸಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಅನಗತ್ಯವಾಗಿ ಸಂಚಾರ ಮಾಡದೆ, ಸರ್ಕಾರದ ಮಾರ್ಗಸೂಚಿ ಪಾಲಿಸುವ ಮೂಲಕ ಕೊರೊನಾ ಹರಡುವಿಕೆಯನ್ನು ತಡೆಯಬೇಕು'' ಎಂದು ಮನವಿ ಮಾಡಿದ್ದಾರೆ.