ಮಂಗಳೂರು, ಡಿ.24 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಗುರುವಾರ 20 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 20 ಮಂದಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಜಿಲ್ಲೆಯಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 32,693ಕ್ಕೆ ಏರಿದೆ. ಈ ಪೈಕಿ 408 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 4,44,245 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಆ ಪೈಕಿ 4,11,552 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಗುರುವಾರ 27 ಮಂದಿ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,553 ಕ್ಕೆ ಏರಿಕೆಯಾಗಿದೆ. ಗುರುವಾರ ಯಾವುದೇ ಕೊರೊನಾ ಸಾವು ಪ್ರಕರಣಗಳು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ 732
ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಗುರುವಾರ 6 ಮಂದಿಗೆ ಕೊರೊನಾ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 22,990ಕ್ಕೆ ಏರಿಕೆಯಾಗಿದೆ. ಈ ಪೈಕಿ 74 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 2,77,120 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,54,130 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರ 7 ರೋಗಿಗಳು ಚೇತರಿಸಿಕೊಂಡಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,728ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 188 ಕೊರೊನಾ ಸಾವುಗಳು ಸಂಭವಿಸಿವೆ.