ನವದೆಹಲಿ, ಡಿ.25 (DaijiworldNews/MB) : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಇಂದು ಮಧ್ಯಾಹ್ನ 12ಕ್ಕೆ ದೇಶವನ್ನು ಹಾಗೂ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಭಾಷಣದ ವೇಳೆ ಪ್ರಧಾನಿ ಮೋದಿಯವರು ರೈತರಿಗೆ ನೂತನ ಕೃಷಿ ಕಾಯ್ದೆಗಳ ನೀತಿಗಳ ಬಗ್ಗೆ ವಿವರಿಸಲಿದ್ದಾರೆ. ಹಾಗೆಯೇ ಈ ವೇಳೆಯೇ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ 18,000 ಕೋಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ೩೦ ದಿನಗಳಿಂದ ದೆಹಲಿ, ಹರಿಯಾಣ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ರೈತರನ್ನು ಉದ್ದೇಶಿಸಿ ಕಾಯ್ದೆಯ ಬಗ್ಗೆ ತಿಳಿಸಲಿದ್ದಾರೆ.