ನವದೆಹಲಿ, 25 (DaijiworldNews/MB) : ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಸೇರಿದಂತೆ ಹಲವು ಗಣ್ಯರು ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ''ಮೇರಿ ಕ್ರಿಸ್ಮಸ್, ಭಗವಂತ ಕ್ರಿಸ್ತನ ಜೀವನ ಮತ್ತು ತತ್ವಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ. ಅವರ ಮಾರ್ಗವು ನ್ಯಾಯಯುತ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುವ ಮಾರ್ಗವನ್ನು ತೋರಿಸುತ್ತಿರಲಿ. ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯವಾಗಿರಲಿ'' ಎಂದು ಹಾರೈಸಿದ್ದಾರೆ.
''ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು. ಈ ಹಬ್ಬವು ಶಾಂತಿ ಮತ್ತು ಸಮೃದ್ಧಿಯನ್ನು ಪೋಷಿಸುತ್ತದೆ ಮತ್ತು ಸಮಾಜದಲ್ಲಿ ಸಾಮರಸ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ನಮ್ಮ ಕ್ರಿಸ್ತನ ಬೋಧನೆಗಳಾದ ಪ್ರೀತಿ, ಸಹಾನುಭೂತಿ ಮತ್ತು ದಾನ ಪ್ರವೃತ್ತಿಯನ್ನು ಅಳವಡಿಸಿಕೊಂಡು ಈ ಸಮಾಜ ಮತ್ತು ರಾಷ್ಟ್ರದ ಕಲ್ಯಾಣಕ್ಕಾಗಿ ನಾವು ತೊಡಗೋಣ'' ಎಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
''ಮೇರಿ ಕ್ರಿಸ್ಮಸ್, ಈ ಹಬ್ಬವು ನಿಮ್ಮ ಮನೆಗಳಿಗೆ ಮತ್ತು ಹೃದಯಗಳಿಗೆ ಶಾಂತಿ ಮತ್ತು ಸಾಮರಸ್ಯವನ್ನು ತರಲಿ'' ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ''ಎಲ್ಲ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊರೋನಾ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿ ಸೀಮಿತ ಆಚರಣೆಗಳಿರಲಿ, ಮಾಸ್ಕ್ ಧರಿಸಿ, ಭೌತಿಕ ಅಂತರ ಕಡ್ಡಾಯ ಪಾಲಿಸಿ. ಆದಷ್ಟೂ ಮನೆಗಳಲ್ಲಿಯೇ ದೇವರನ್ನು ಆರಾಧಿಸಿ. ನಾಡಿನಲ್ಲಿ ಆರೋಗ್ಯ, ಶಾಂತಿ, ಸಮೃದ್ಧಿಗಳು ನೆಲೆಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ'' ಎಂದಿದ್ದಾರೆ.