ಯಲ್ಲಾಪುರ, 25 (DaijiworldNews/MB) : ಹಿರಿಯ ಸಾಹಿತಿ ನಾ.ಸು.ಭರತನಹಳ್ಳಿ (84), ಶಿರಸಿಯ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಪತ್ರಕರ್ತರಾಗಿ, ಪತ್ರಿಕೆಯೊಂದರ ಸಂಪಾದಕರಾಗಿ, ಅಂಕಣಕಾರರಾಗಿ, ಕಥೆ, ಕಾದಂಬರಿಕಾರರಾಗಿ ಸಾಹಿತ್ಯ ಲೋಕಕ್ಕೆ ಇವರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಸಂದರ್ಭ ಯಲ್ಲಾಪುರದಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲೇ ಮೊದಲ ಸಾಹಿತ್ಯ ಭವನದ ನಿರ್ಮಾಣಕ್ಕೆ ನೇತೃತ್ವ ವಹಿಸಿದ್ದರು.
ಅವರು ತಾಲ್ಲೂಕು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳ ಸರ್ವಾಧ್ಯಕ್ಷರೂ ಕೂಡಾ ಆಗಿದ್ದರು. ಹಿಂದಿ ಶಿಕ್ಷಕರಾಗಿದ್ದ ಅವರು ಶಿಕ್ಷಣ, ಸಾಹಿತ್ವ, ಧಾರ್ಮಿಕ, ಸಾಮಾಜಿಕ ಕ್ಷೇತ್ರದ ಕೊಡುಗೆಗೆ 'ಕರ್ನಾಟಕ ಶ್ರೀ' ಪ್ರಶಸ್ತಿಗೆ ಭಾಜನರಾಗಿದ್ದರು.