ಚೆನ್ನೈ,ಡಿ.25 (DaijiworldNews/HR): ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಕಾಣಿಸಿಕೊಂಡಿದ್ದು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.
ಹೈದರಾಬಾದ್ನಲ್ಲಿ ಸಿನಿಮಾ ಶೂಟಿಂಗ್ ನಲ್ಲಿದ್ದಾಗ ಚಿತ್ರತಂಡದ ನಾಲ್ವರಿಗೆ ಕೊರೊನಾ ದೃಢಪಟ್ಟಿದ್ದು, ಬಳಿಕ ರಜನಿಕಾಂತ್ ಅವರನ್ನು ಪರೀಕ್ಷಿಸಲಾಗಿತ್ತು ಅವರಿಗೆ ಕೊರೊನಾ ನೆಗೆಟಿವ್ ಎಂಬುದಾಗಿ ತಿಳಿಸಿದೆ.
ಇನ್ನು ರಜನಿಕಾಂತ್ ಅವರು 'ಅಣ್ಣಾತ್ತೆ' ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಆದರೆ ಇದೀಗ ಚಿತ್ರತಂಡದ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಕಾರಣ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹೋಗಿದೆ.