ಲಖನೌ,ಡಿ.25 (DaijiworldNews/HR): "ಬಿಜೆಪಿ ನಾಯಕರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆದಂತೆ ಮತ್ತು ಎಲ್ಲಾ ವಿರೋಧ ಪಕ್ಷಗಳ ನಾಯಕರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ವಿರೋಧ ಪಕ್ಷಗಳ ನಾಯಕರ ವಿರುದ್ಧ ಕೂಡ ರಾಜಕೀಯ ದುರುದ್ದೇಶದ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಈ ಪ್ರಕರಣಗಳನ್ನೂ ಹಿಂಪಡೆಯಬೇಕು" ಎಂದರು.
ಇನ್ನು "ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಖಂಡಿಸಿ ರೈತರು ಪ್ರತಿಭಟಿಸಿತ್ತಿದ್ದು ಸರ್ಕಾರ ಅವರ ನೆರವಿಗೆ ಬರಬೇಕು ಮತ್ತು ಮೂರು ಹೊಸ ಕೃಷಿ ಮಸೂದೆಗಳನ್ನು ರದ್ದುಪಡಿಸಬೇಕು" ಎಂದು ಒತ್ತಾಯಿಸಿದ್ದಾರೆ.