ನವದೆಹಲಿ, ಡಿ.25 (DaijiworldNews/HR): ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು 2020ರ ಪ್ರತಿಷ್ಠಿತ ಮದರ್ ತೆರೆಸಾ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ವರ್ಷ ಕೊರೊನಾ ನಿಯಂತ್ರಣದ ಹೋರಾಟದಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಾರ್ಮೊನಿ ಫೌಂಡೇಷನ್ ಅಧ್ಯಕ್ಷ ಅಬ್ರಹಾಂ ಮಥಾಯ್ ತಿಳಿಸಿದ್ದಾರೆ.
ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ (64) ಅವರು ಪರಿಣತರು ಮತ್ತು ವಿಜ್ಞಾನಿಗಳ ಸಲಹೆಗಳನ್ನು ತೆಗೆದುಕೊಂಡು ಕೊರೊನಾ ಸೋಂಕು ತಡೆಗಾಗಿ ತೆಗೆದುಕೊಂಡಿರುವ ಕ್ರಮಗಳು ಮತ್ತು ಕೊರೊನಾ ಸಮಯದಲ್ಲಿ ಎಲ್ಲಾ ಕೇರಳಿಗರಿಗೆ ಸಹಾಯ ಮಾಡುವ ಮೂಲಕ ಇತರೆ ರಾಜ್ಯಗಳು ಮತ್ತು ದೇಶಗಳಿಗೆ ಮಾದರಿಯಾಗಿದ್ದಾರೆ ಎಂದು ಸಂಸ್ಥೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎನ್ನಲಾಗಿದೆ.