ಮಂಗಳೂರು, ಡಿ.25 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶುಕ್ರವಾರ 30 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಮಂದಿಗೆ ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 30 ಮಂದಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಜಿಲ್ಲೆಯಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 32,723ಕ್ಕೆ ಏರಿದೆ. ಈ ಪೈಕಿ 405 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 4,44,284 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಆ ಪೈಕಿ 4,14,561 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,586 ಕ್ಕೆ ಏರಿಕೆಯಾಗಿದೆ. ಶುಕ್ರವಾರ ಯಾವುದೇ ಕೊರೊನಾ ಸಾವು ಪ್ರಕರಣಗಳು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ 732 ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 13 ಮಂದಿಗೆ ಕೊರೊನಾ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 23,003ಕ್ಕೆ ಏರಿಕೆಯಾಗಿದೆ. ಈ ಪೈಕಿ 73 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 2,78,222 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,55,219 ಮಂದಿಯ ವರದಿ ನೆಗೆಟಿವ್ ಆಗಿದೆ. ಶುಕ್ರವಾರ 14 ರೋಗಿಗಳು ಚೇತರಿಸಿಕೊಂಡಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,742ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 188 ಕೊರೊನಾ ಸಾವುಗಳು ಸಂಭವಿಸಿವೆ.