ನವದೆಹಲಿ, ಡಿ.25 (DaijiworldNews/HR): ದೆಹಲಿಯ ಜಲ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ ಘಟನೆಗೆ ಸಂಬಂಧಪಟ್ಟಂತೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಎಪಿ ನಾಯಕ ರಾಘವ್ ಛಡ್ಡಾ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ವಿಡಿಯೊ ಟ್ವೀಟ್ ಮಾಡಿರುವ ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರೂ ಆಗಿರುವ ರಾಘವ್ ಛಡ್ಡಾ, "ಕಾನೂನುಬಾಹಿರವಾಗಿ 200ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಸಭೆ ಸೇರಿದ್ದಾರೆ ಮತ್ತು ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಿದ್ದಾರೆ. ಇದಕ್ಕೆ ದೆಹಲಿ ಘಟಕದ ಬಿಜೆಪಿ ಅಧ್ಯಕ್ಷ ಸೇರಿದಂತೆ ಹಲವು ಮುಖಂಡರ ಬೆಂಬಲವಿದೆ" ಎಂದು ಆರೋಪಿದ್ದಾರೆ.
ಇನ್ನು ಇದೇ ವಿಚಾರವಾಗಿ ಗುರುವಾರ ಸಂಜೆ ಟ್ವೀಟ್ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, "ನಮ್ಮ ಕೊನೆಯ ಉಸಿರಿನವರೆಗೂ ರೈತರನ್ನು ನಾನು ಬೆಂಬಲಿಸುತ್ತೇವೆ ಎಂಬುದನ್ನು ಬಿಜೆಪಿ ಅರ್ಥಮಾಡಿಕೊಳ್ಳಬೇಕು. ಇಂತಹ ಹೇಡಿತನದ ದಾಳಿಗೆ ನಾವು ಹೆದರುವುದಿಲ್ಲ" ಎಂದು ತಿಳಿಸಿದ್ದರು.