ನವದೆಹಲಿ,ಡಿ.26 (DaijiworldNews/HR): ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ನಡೆದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಮೃತ ವ್ಯಕ್ತಿಯನ್ನು ಜುಗಾಲ್ ಕಿಶೋರ್ ಎಂದು ಗುರುತಿಸಲಾಗಿದೆ.
ಈ ಕುರಿತು ಮಾತನಾಡಿರುವ ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್, ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಖಾನೆಯ ಬಾಗಿಲು ಒಡೆದು ಒಳಗಿದ್ದ ಮೂವರನ್ನು ರಕ್ಷಿಸಿದ್ದಾರೆ, ಅವರಲ್ಲಿ ಒಬ್ಬರು ಪ್ರಜ್ಞಾಹೀನರಾಗಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಕೂಡಲೇ ಆತನನ್ನು ದೀನ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿದ್ದಾರೆ ಎಂದರು.