ಬೆಂಗಳೂರು,ಡಿ.26 (DaijiworldNews/HR): ಕನ್ನಡ ಚಿತ್ರರಂಗದ ನಟ ದಿವಂಗತ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ಮಾಗಡಿ ರಸ್ತೆಯಲ್ಲಿರುವ ನಡೆದಿದೆ.
ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಹಿಂದೆಯೂ ಇದೇ ಸ್ಥಳದಲ್ಲಿ ಪ್ರತಿಮೆ ಧ್ವಂಸವಾಗಿತ್ತು. ಆಗ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು.
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿ ಪತ್ತೆಗೆ ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸಿದ್ದಾರೆ.