ನವದೆಹಲಿ, ಡಿ. 26 (DaijiworldNews/MB) : ''ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಸಮಸ್ಯೆಯನ್ನು ಕೇಂದ್ರ ಸರ್ಕಾರ ಆಲಿಸಬೇಕು'' ಎಂದು ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರತಿಭಟನೆಗೆ ಸಂಬಂಧಿಸಿದ ಹಾಡಿನ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ''ಮಣ್ಣಿನ ಕಣ ಕಣವು ಪ್ರತಿಧ್ವನಿಸುತ್ತಿದೆ. ಸರ್ಕಾರ ಆಲಿಸಬೇಕು'' ಎಂದು ಹೇಳಿದ್ದಾರೆ.
ಕಳೆದ 31 ದಿನಗಳಿಂದ ದೆಹಲಿ ಗಡಿಗಳಲ್ಲಿ ರೈತರು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆದ ಹಲವು ಹಂತದ ಮಾತುಕತೆಗಳು ಈ ಸಂದರ್ಭ ವಿಫಲವಾಗಿದೆ.
ಡಿಸೆಂಬರ್ 24ರಂದು ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್ ಮತ್ತು ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ಈ ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ 2 ಕೋಟಿ ಸಹಿ ಸಂಗ್ರಹದ ಮನವಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದರು.