ಬೆಳಗಾವಿ, ಡಿ.26 (DaijiworldNews/PY): "ಬಿ.ಎಸ್.ವೈ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ" ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರ ನಗರದಲ್ಲಿ ಮಾತನಾಡಿದ ಅವರು, "ಸಂಕ್ರಾತಿಗೆ ಸಚಿವ ಸಂಪುಟ ವಿಸ್ತರಣೆ, ಮಹತ್ವದ ಬದಲಾವಣೆ ಆಗಲಿದೆ ಎಂದು ಹೇಳಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ" ಎಂದರು
"ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತನಾಡಬೇಡಿ ಎಂದು ನನ್ನ ಹಿತೈಷಿಗಳ ಹೇಳಿದ್ದಾರೆ. ಬದಲಾಗಿ ಪಕ್ಷದ ವರಿಷ್ಠರು ಈ ರೀತಿ ಹೇಳಿಲ್ಲ. ಅವರು ನಮ್ಮ ಪಕ್ಷದ ವರಿಷ್ಠರು ಸೂಚನೆ ಕೊಡುವಂತ ದೊಡ್ಡ ನಾಯಕಿ ಅಲ್ಲ" ಎಂದು ಹೇಳಿದರು.
ರೈಲ್ವೆ ಖಾತೆ ರಾಜ್ಯ ಸಚಿವ ದಿ.ಸುರೇಶ ಅಂಗಡಿ ಅವರ ಪುತ್ರಿ ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಬಗ್ಗೆ ಯಾವುದೇ ರೀತಿಯಾದ ವಿಶೇಷ ಅರ್ಥ ಕಲ್ಪಿಸುವಂತ ಅವಶ್ಯಕತೆ ಇಲ್ಲ" ಎಂದರು.
"ದಿ.ಸುರೇಶ ಅಂಗಡಿ ಅವರ ಪತ್ನಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಉತ್ತಮ ಎಂದು ಪಕ್ಷದ ವರಿಷ್ಠರಿಗೆ ಹೇಳಿದ್ದೇನೆ. ಈ ವಿಚಾರದ ಬಗ್ಗೆ ಅವರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ" ಎಂದು ಹೇಳಿದರು.