ಬೆಂಗಳೂರು, ಡಿ.26 (DaijiworldNews/PY): "ರೈತರ ಪ್ರತಿಭಟನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಲಜ್ಜೆಗೇಡಿತನ ಪ್ರದರ್ಶಿಸುತ್ತಿದೆ" ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ರೈತರ ಪ್ರತಿಭಟನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಲಜ್ಜೆಗೇಡಿತನ ಪ್ರದರ್ಶಿಸುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜಾಗುತ್ತಿದ್ದರೂ ಮೋದಿ ಸರ್ಕಾರದ ನಿರ್ಲಿಪ್ತತೆ ಖಂಡನೀಯ. ಒಂದು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರ ಸ್ಪಂದಿಸದೇ ಹೋದರೆ, ಇದು ದಪ್ಪ ಚರ್ಮದ ಸರ್ಕಾರವಲ್ಲದೆ ಮತ್ತೇನು.?" ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪುನಃ ಗಮನ ಸೆಳೆದಿದೆ. ಈ ಪ್ರತಿಭಟನೆಯ ಬಗ್ಗೆ ಅಮೇರಿಕಾ ಏಳು ಸಂಸದರು ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಅವರಿಗೆ ಪತ್ರ ಬರೆದಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ.