ಮಂಗಳೂರು, ಡಿ.26 (DaijiworldNews/PY): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 34 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 34 ಮಂದಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 32,757ಕ್ಕೆ ಏರಿದೆ. ಈ ಪೈಕಿ 417 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 4,49,141 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಆ ಪೈಕಿ 4,16,566 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಶನಿವಾರ 22 ಮಂದಿ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,608 ಕ್ಕೆ ಏರಿಕೆಯಾಗಿದೆ. ಶನಿವಾರ ಯಾವುದೇ ಕೊರೊನಾ ಸಾವು ಪ್ರಕರಣಗಳು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ 732
ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಶನಿವಾರ 3 ಮಂದಿಗೆ ಕೊರೊನಾ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 23,006ಕ್ಕೆ ಏರಿಕೆಯಾಗಿದೆ. ಈ ಪೈಕಿ 64 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 2,79,279 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,56,273 ಮಂದಿಯ ವರದಿ ನೆಗೆಟಿವ್ ಆಗಿದೆ. ಶನಿವಾರ 12 ರೋಗಿಗಳು ಚೇತರಿಸಿಕೊಂಡಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,754ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 188 ಕೊರೊನಾ ಸಾವುಗಳು ಸಂಭವಿಸಿವೆ.