ನವದೆಹಲಿ, ಡಿ.26 (DaijiworldNews/PY): "ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಡಿ.29ರಂದು ಕೇಂದ್ರ ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ತೀರ್ಮಾನ ಮಾಡಿವೆ" ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ತಿಳಿಸಿರುವ ಭಾರತೀಯ ಕಿಸಾನ್ ಸಂಘದ ಹಿರಿಯ ಮುಖಂಡ ರಾಕೇಶ್ ಟಿಕಾಯತ್, "ಕೇಂದ್ರ ಸರ್ಕಾರದೊಂದಿನ ಮಾತುಕತೆಯಲ್ಲಿ ಮೂರು ನೂತನ ಕೃಷಿ ಕಾಯ್ದೆಗಳ ರದ್ಧತಿ ಹಾಗೂ ಎಂಎಸ್ ಖಾತ್ರಿ ವಿಷಯಗಳು ಮುಖ್ಯವಾದ ಅಂಶವಾಗಿದೆ" ಎಂದಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾಯ್ದೆಗಳ ರದ್ದತಿ ಹಾಗೂ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದಾರೆ.