ಚಿತ್ರದುರ್ಗ, ಡಿ. 27 (DaijiworldNews/MB) : ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ ಘಟನೆ ಮೊಳಕಾಲ್ಮೂರು ತಾಲೂಕಿನ ಬಿಜಿಕೆರೆ ಬಳಿ ರವಿವಾರ ಮುಂಜಾನೆ ನಡೆದಿದೆ.
ಮೃತರು ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನವರು ಎಂದು ಹೇಳಲಾಗಿದೆ.
ಬೆಂಗಳೂರಿನಿಂದ ಲಿಂಗಸಗೂರಿಗೆ ಬಸ್ ಸಂಚರಿಸುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಕ್ರೂಸರ್ನಲ್ಲಿದ್ದ ಕಾರ್ಮಿಕರು ಚುನಾವಣೆಗೆ ಮತದಾನ ಮಾಡಲೆಂದು ಗ್ರಾಮಗಳಿಗೆ ಬಂದಿದ್ದರು ಎಂದು ವರದಿ ತಿಳಿಸಿದೆ.
ಪ್ರಸ್ತುತ ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.