ನಾಗಪುರ,ಡಿ. 27 (DaijiworldNews/HR): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದರ ಬಗ್ಗೆ ಸಿಬಿಐ ಪ್ರಕರಣದ ತನಿಖಾ ವರದಿಯನ್ನು ಆದಷ್ಟು ಬೇಗ ಬಹಿರಂಗಪಡಿಸಬೇಕು ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖಾ ವರದಿಗಾಗಿ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಬಗ್ಗೆ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಸುಶಾಂತ್ ಅವರ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದನ್ನು ಸಿಬಿಐ ಆದಷ್ಟು ಬೇಗ ಬಹಿರಂಗಪಡಿಸಬೇಕು" ಎಂದರು
ಇನ್ನು "ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಆರು ತಿಂಗಳಾಗಿದೆ ಹಾಗಾಗಿ ಸಿಬಿಐ ಆದಷ್ಟು ಬೇಗ ತನ್ನ ವರದಿಯನ್ನು ಬಹಿರಂಗಪಡಿಸಬೇಕು" ಎಂದು ಹೇಳಿದ್ದಾರೆ.