ನವದೆಹಲಿ,ಡಿ. 27 (DaijiworldNews/HR): ಶಿವಸೇನಾ ನಾಯಕ ಸಂಜಯ್ ರಾವತ್ ಅವರ ಪತ್ನಿ ವರ್ಷಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ್ದು, ಡಿ.29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಈ ತನಿಖೆಯು ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಬಗ್ಗೆ ವಿಚಾರಣೆ ನಡೆಸುವುದಕ್ಕಾಗಿ ಸಮನ್ಸ್ ಜಾರಿಗೊಳಿಸಿದೆ.
ಇನ್ನು ಪಿಎಂಸಿ ಬ್ಯಾಂಕ್ ಹಗರಣದ ಆರೋಪಿಯಾಗಿರುವ ಪರ್ವೀನ್ ರಾವುತ್ ಅವರೊಂದಿಗೆ ವರ್ಷಾ ರಾವುತ್ 50 ಲಕ್ಷ ರೂಪಾಯಿ ವಹಿವಾಟು ನಡೆಸಿದ್ದು, ಜಮೀನು ಖರೀದಿಸುವುದಕ್ಕೆ ಸಾಲ ರೂಪದಲ್ಲಿ ಈ ಹಣವನ್ನು ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.