ನವದೆಹಲಿ,ಡಿ. 27 (DaijiworldNews/HR): ಕೇಂದ್ರ ಸರ್ಕಾರವನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ದಯಮಾಡಿ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ, ರೈತರು ಅವರ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ಇಂದು ಸಿಂಘು ಗಡಿ ಪ್ರದೇಶಕ್ಕೆ ಎರಡನೇ ಬಾರಿಗೆ ಭೇಟಿ ನೀಡಿ ಮಾತನಾಡಿದ ಅವರು, "ಕೇಂದ್ರದ ಯಾವುದೇ ಸಚಿವರು ರೈತರೊಂದಿಗೆ ಮುಕ್ತವಾದ ಚರ್ಚೆ ನಡೆಸುವ ಸವಾಲು ಸ್ವೀಕಸಬೇಕು ಮತ್ತು ಈ ಕಾಯ್ದೆಗಳು ಎಷ್ಟು ಉಪಯುಕ್ತವಾಗಿದೆ ಅಥವಾ ಹಾನಿಕಾರಕ ಎಂಬುದು ಅದರಿಂದ ತಿಳಿಯುತ್ತದೆ" ಎಂದರು.
ಇನ್ನು "ರೈತರು ತಮ್ಮ ಉಳಿವಿಗಾಗಿ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾಯ್ದೆಗಳು ಅವರ ಭೂಮಿಯನ್ನು ಅವರಿಂದ ದೂರಮಾಡುತ್ತದೆ. ಕೇಂದ್ರ ಸರ್ಕಾರವನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ದಯಮಾಡಿ ನೀವು ಜಾರಿಗೊಳಿಸಿರುವ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ" ಎಂದು ಮನವಿ ಮಾಡಿದ್ದಾರೆ.
ರೈತರು ಸಿಂಘು ಗಡಿ ಪ್ರದೇಶ ಸೇರಿದಂತೆ ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಕೂಡ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ.