ಮಂಗಳೂರು, ಡಿ. 27 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ರವಿವಾರ 18 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 18 ಮಂದಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 32,775ಕ್ಕೆ ಏರಿದೆ. ಈ ಪೈಕಿ 401 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 4,51,657 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಆ ಪೈಕಿ 4,18,882 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ರವಿವಾರ 34 ಮಂದಿ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,642 ಕ್ಕೆ ಏರಿಕೆಯಾಗಿದೆ. ರವಿವಾರ ಯಾವುದೇ ಕೊರೊನಾ ಸಾವು ಪ್ರಕರಣಗಳು ದೃಢಪಟ್ಟಿಲ್ಲ. ಜಿಲ್ಲೆಯಲ್ಲಿ ಈವರೆಗೆ 732
ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿ ಜಿಲ್ಲೆಯಲ್ಲಿ ರವಿವಾರ ಒಬ್ಬರಿಗೆ ಕೊರೊನಾ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 23,007ಕ್ಕೆ ಏರಿಕೆಯಾಗಿದೆ. ಈ ಪೈಕಿ 60 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 2,80,528ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,57,521 ಮಂದಿಯ ವರದಿ ನೆಗೆಟಿವ್ ಆಗಿದೆ. ರವಿವಾರ 5 ರೋಗಿಗಳು ಚೇತರಿಸಿಕೊಂಡಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,759ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 188 ಕೊರೊನಾ ಸಾವುಗಳು ಸಂಭವಿಸಿವೆ.