ಡೆಹ್ರಾಡೂನ್, ಡಿ.28 (DaijiworldNews/PY): ಇತ್ತೀಚೆಗೆ ಕೊರೊನಾ ದೃಢಪಟ್ಟ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಆಸ್ಪತ್ರಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಡಿ.18ರಂದು ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಅವರು ಮನೆಯಲ್ಲೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರು ರವಿವಾರ ಸಂಜೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ ಅವರು ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.