ನವದೆಹಲಿ, ಡಿ.28 (DaijiworldNews/PY): ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪಕ್ಷದ 136ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗೈರಾಗಿದ್ದಾರೆ.
ಪಕ್ಷದ ಇಬ್ಬರು ಪ್ರಮುಖ ನಾಯಕರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಎ.ಕೆ.ಆಂಟೊನಿ ಅವರು ಪಕ್ಷದ ಧ್ವಜಾರೋಹಣ ಮಾಡಿದರು.
ಸೋನಿಯಾ ಗಾಂಧಿ ಅವರು ಇತ್ತೀಚಿನ ದಿನಗಳಿಂದ ಸಾರ್ವಜನಿಕ ಕಾರ್ಯಕ್ರಗಳಿಗೆ ಹಾಜರಾಗುದ್ನಿ ನಿಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರು ವೈಯುಕ್ತಿಕ ಕಾರ್ಯಗಳ ಮೇರೆಗೆ ಇಟಲಿಗೆ ತೆರಳಿದ್ದಾರೆ.
ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷದ ಹಿರಿಯ ಕಾರ್ಯಕಾರಿ ಸದಸ್ಯರು, ಹಿರಿಯ ನಾಯಕ ಗುಲಾಂ ನಬಿ ಆಝಾದ್ ಹಾಗೂ ಆನಂದ ಶರ್ಮಾ ಪಾಲ್ಗೊಂಡಿದ್ದರು.
ಈ ವೇಳೆ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ರೈತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಬೇಕು. ಅಲ್ಲದೇ, ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು. ರೈತರ ವಿಚಾರದಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ. ಅಲ್ಲದೇ, ರೈತರ ಪ್ರತಿಭಟನೆ ರಾಜಕೀಯ ಪಿತೂರಿ ಎನ್ನುವುದು ತರವಲ್ಲ" ಎಂದರು.