ನವದೆಹಲಿ, ಡಿ. 28 (DaijiworldNews/MB) : ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಕೇಂದ್ರ ಸರ್ಕಾರವು ಮುಖಂಡರನ್ನು ಆಹ್ವಾನಿಸಿದೆ.
ಈ ಹಿಂದೆ ಕೇಂದ್ರ ಸರ್ಕಾರವು ಎಲ್ಲಾ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಬದ್ದವಾಗಿದೆ. ರೈತರೇ ದಿನಾಂಕ ಹಾಗೂ ಸಮಯ ನಿಗದಿಪಡಿಸಿ ಎಂದು ಹೇಳಿತ್ತು. ಈ ಪ್ರಕಾರವಾಗಿ ರೈತರು ಸಭೆ ಸೇರಿ ಡಿಸೆಂಬರ್ 29 ರಂದು ಮಾತುಕತೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಈಗ ಸರ್ಕಾರವು ಡಿಸೆಂಬರ್ 30ಕ್ಕೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನಭವನದಲ್ಲಿ ರೈತ ಮುಖಂಡರ ಸಭೆ ಕರೆದಿದೆ.
ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ, ಆ ಕಾನೂನುಗಳ ರದ್ದತಿಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ರೈತರು ದೆಹಲಿಯ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಲ್ಲಿದ್ದಾರೆ.