ಮಂಗಳೂರು, ಡಿ. 28(DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ ಎಂಟು ಹೊಸ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಸಂಖ್ಯೆ 32,783ಕ್ಕೆ ಏರಿಕೆಯಾಗಿದೆ. ಈ ಪೈಕಿ 372 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 4,52,865 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,20,082 ನಕಾರಾತ್ಮಕವಾಗಿದೆ.
ಒಟ್ಟು 37 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,679ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿಯ ಇಂದಿನ ಕೊರೋನಾ ವರದಿ:
ಸೋಮವಾರ 15 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕರೋನಾ ವೈರಸ್ ಸಂಖ್ಯೆ 23,021ಕ್ಕೆ ಏರಿದೆ. ಈ ಪೈಕಿ 66 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 2,81,639 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,58,618 ಮಾದರಿಗಳು ನಕಾರಾತ್ಮಕವಾಗಿವೆ.
ಸೋಮವಾರ ಎಂಟು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 22,767ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 188 ಸಾವುಗಳು ಸಂಭವಿಸಿವೆ.