ಚಿಕ್ಕಮಗಳೂರು, ಡಿ. 29 (DaijiworldNews/MB) : ಕಡೂರು ತಾಲೂಕಿನ ಗುಣಸಾಗರ ಬಳಿ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧರ್ಮೇಗೌಡ ಅವರು ಸೋಮವಾರ ಸಂಜೆ ಮನೆಯಿಂದ ತಮ್ಮ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ಹೊರಟ್ಟಿದ್ದು ರಾತ್ರಿಯಾದರೂ ಹಿಂದಿರುಗಿ ಬಂದಿರಲಿಲ್ಲ. ಈ ಹಿನ್ನೆಲೆ ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದು ಕಡೂರು ತಾಲ್ಲೂಕಿನ ಗುಣಸಾಗರ ರೈಲು ಹಳಿಯ ಮೇಲೆ ಮಂಗಳವಾರ ಬೆಳಗ್ಗಿನ ಜಾವ ಎಸ್.ಎಲ್. ಧರ್ಮೇಗೌಡ ಅವರ ಮೃತದೇಹ ಪತ್ತೆಯಾಗಿದೆ.
ಇನ್ನು ಈ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರ ಮೃತ ದೇಹದ ಜೊತೆ ಡೆತ್ನೋಟ್ ಕೂಡಾ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ ಅವರು ತಮ್ಮ ಪರಿಚಯಸ್ಥರಿಗೆ ಕರೆ ಮಾಡಿ ರೈಲಿನ ಸಮಯದ ಬಗ್ಗೆ ಕೇಳಿದ್ದರು ಎಂದು ಕೂಡಾ ಹೇಳಲಾಗಿದೆ.