ಚಂಡೀಗಡ, ಡಿ.29(DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಪಂಜಾಬಿನಲ್ಲಿ ಈವರೆಗೆ 1,561 ಮೊಬೈಲ್ ಟವರ್ಗಳಿಗೆ ಹಾನಿ ಮಾಡಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪಂಜಾಬ್ನಲ್ಲಿ ಅರಾಜಕತೆ ಸೃಷ್ಟಿಯಾಗಲು ಬಿಡುವುದಿಲ್ಲ, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಇಂತಹ ಕೃತ್ಯಗಳನ್ನು ಮಾಡದಂತೆ ಮನವಿ ಮಾಡಿದರೆ ಅದನ್ನು ನಿರ್ಲಕ್ಷಿಸಲಾಗುತ್ತಿದ್ದು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು ಪಂಜಾಬ್ನ 22 ಜಿಲ್ಲೆಗಳಲ್ಲಿ ಒಟ್ಟು 21,306 ಮೊಬೈಲ್ ಟವರ್ಗಳಿದ್ದು, ಇದರಲ್ಲಿ ಒಟ್ಟು 1,561 ಮೊಬೈಲ್ ಟವರ್ಗಳಿಗೆ ಹಾನಿಗೊಳಿಸಿದ್ದಾರೆ ಎನ್ನಲಾಗಿದೆ.
ಅದಾನಿ ಅಥವಾ ಮುಕೇಶ್ ಅಂಬಾನಿಗೆ ಪೂರಕವಾಗಿ ಕೃಷಿ ಮಸೂದೆಯನ್ನು ಜಾರಿಗೊಳಿಸಿದ್ದಾರೆ ಎಂಬ ತಪ್ಪು ಕಲ್ಪನೆಯಿಂದಾಗಿ ರೈತರು ಮೊಬೈಲ್ ಟವರ್ಗಳಿಗೆ, ವಿಶೇಷವಾಗಿ ರಿಲಯನ್ಸ್ ಸಂಸ್ಥೆಗೆ ಸೇರಿದ ‘ಜಿಯೊ ಟವರ್’ಗಳಿಗೆ ಹಾನಿ ಉಂಟುಮಾಡುತ್ತಿದ್ದಾರೆ.