ನವದೆಹಲಿ, ಡಿ.29(DaijiworldNews/HR): ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನನಗೆ ಕೊರೊನಾ ಸೋಂಕಿನ ಕೆಲವೊಂದು ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಪರೀಕ್ಷೆಗೆ ಒಳಗಾದ್ದು, ಈ ವೇಳೆ ಸೋಂಕು ತಗುಲಿರುವುದು ತಿಳಿದುಬಂದಿದೆ" ಎಂದರು.
ಇನ್ನು "ನನಗೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ. ವೈದ್ಯರ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕ ವಾಸವಾಗಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಮನೆಯಲ್ಲಿಯೇ ಇರಿ" ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.