ಬೆಂಗಳೂರು, ಡಿ. 29(DaijiworldNews/HR): ಕೊರೊನಾ ಸಂಕಷ್ಟದ ಸಮಯದಲ್ಲಿ ಕರ್ನಾಟಕದಲ್ಲಿ 1.54 ಲಕ್ಷ ಕೋಟಿ ಮೊತ್ತದ 95 ಹೂಡಿಕೆ ಪ್ರಸ್ತಾವಗಳಿಗೆ ಒಪ್ಪಿಗೆ ನೀಡಲಾಗಿದ್ದು, ಕರ್ನಾಟಕ ರಾಜ್ಯವು ಹೂಡಿಕೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಈ ಕುರಿತು ಇಂದು ನಡೆದ ವೆಬಿನಾರ್ನಲ್ಲಿ ಮಾತನಾಡಿದ ಅವರು, "2019 ಮತ್ತು 2020ರಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮೂಲಕ 410 ಹೂಡಿಕೆ ಪ್ರಸ್ತಾವಗಳಿಗೆ ಒಪ್ಪಿಗೆ ನೀಡಲಾಗಿದ್ದು, 82,015 ಕೋಟಿ ಹೂಡಿಕೆ ಬಂದಿದ್ದು, 2.27 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ" ಎಂದರು.
ಇನ್ನು "ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಪೂರೈಸಲು ಇಂಧನ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ತರಲಾಗುವುದು ಮತ್ತು ಗ್ರಿಡ್ಗಳ ಬಳಿ ಬ್ಯಾಟರಿ ಸ್ಟೋರೇಜ್ ನಿರ್ಮಿಸುವ ಪ್ರಸ್ತಾವವಿದೆ" ಎಂದು ಹೇಳಿದ್ದಾರೆ.