ಪಾಟ್ನಾ, ಡಿ. 29 (DaijiworldNews/SM): ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಧರಣಿ ನಿರತ ರೈತರನ್ನು ಪೊಲೀಸರು ತಡೆದ ಘಟನೆ ನಡೆದಿದ್ದು, ಈ ವೇಳೆ ಬ್ಯಾರಿಕೇಡ್ ಗಳನ್ನು ಕಿತ್ತು ಮುನ್ನುಗ್ಗಲು ರೈತರು ಮುಂದಾಗಿದ್ದಾರೆ. ಆ ಸಂದರ್ಭ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಸಾವಿರಾರು ಸಂಖ್ಯೆಯಲ್ಲಿ ರೈತರು ಧರಣಿಯಲ್ಲಿ ಭಾಗಿಗಳಾಗಿದ್ದರು. ಧರಣಿ ನಿರತರನ್ನು ಡಕ್ ಬಂಗಲೆ ಕ್ರಾಸಿಂಗ್ನಲ್ಲಿ ಪೊಲೀಸರು ತಡೆದುನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಯಾರಿಕೇಡರ್ ಗಳನ್ನು ತಳ್ಳಿ ಮುನ್ನುಗ್ಗಲು ಧರಣಿ ನಿರತರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಕೆಲವು ರೈತರಿಗೆ ಗಾಯಗಳಾಗಿದೆ. ಅವರನ್ನು ಸ್ಥಳೀಯವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಸ್ತೆ ಮಧ್ಯೆ ನಮ್ಮನ್ನು ತಡೆಯುವುದರ ಜೊತೆ ಲಾಠಿ ಚಾರ್ಜ್ ಮಾಡಿ ತಮ್ಮ ಧ್ವನಿಯನ್ನು ಹತ್ತಿಕ್ಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.