ಮಂಗಳೂರು, ಡಿ. 29 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂಗಳವಾರ 35 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,818ಕ್ಕೆ ಏರಿಕೆಯಾಗಿದೆ. ಈ ಪೈಕಿ 373 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 4,57,223 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,24,405 ಮಂದಿಯ ವರದಿ ನೆಗೆಟಿವ್ ಆಗಿದೆ. ಮಂಗಳವಾರ 34 ಜನ ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಮಂಗಳವಾರ ಉದುಪಿ ಜಿಲ್ಲೆಯಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 23,028ಕ್ಕೆ ಏರಿಕೆಯಾಗಿದೆ. ಈ ಪೈಕಿ 66 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇಲ್ಲಿಯವರೆಗೆ 2,82,777 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 2,59,749 ಮಂದಿಯ ವರದಿ ನೆಗೆಟಿವ್ ಆಗಿವೆ. ಮಂಗಳವಾರ 7 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 188 ಸಾವುಗಳು ಸಂಭವಿಸಿವೆ.