ಬೆಂಗಳೂರು, ಡಿ. 30 (DaijiworldNews/MB) : ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಬುಧವಾರ ನಡೆಯಲಿದ್ದು, 3 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಒಟ್ಟು 226 ತಾಲ್ಲೂಕುಗಳ 91,339 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಈ ಪೈಕಿ 8,074 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು ಉಳಿದ 3,11,887 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 43,238 ಮತ್ತು ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ನಡೆದಿತ್ತು. ಡಿ.22 ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ 82.04 ರಷ್ಟು ಮತ್ತು ಡಿ.27 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಶೇ 80.71 ರಷ್ಟು ಮತದಾನವಾಗಿತ್ತು.
ಬೀದರ್ ಜಿಲ್ಲೆಯೊಂದರಲ್ಲಿ ಇವಿಎಂ ಬಳಸಲಾಗಿದ್ದು ಉಳಿದ ಎಲ್ಲ ಕಡೆಗಳಲ್ಲಿ ಮತ ಪತ್ರಗಳನ್ನು ಬಳಸಲಾಗಿದ್ದು ಇದರಿಂದಾಗಿ ಎಣಿಕೆ ಕಾರ್ಯ ತಡವಾಗುವ ಸಾಧ್ಯತೆ ಅಧಿಕವಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ 31 ರ ಸಂಜೆ 5 ಗಂಟೆವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.