ಮೈಸೂರು, ಡಿ.30 (DaijiworldNews/HR): ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಮೃತ ಚುನಾವಣಾ ಅಧಿಕಾರಿಕಾರಿಯನ್ನು ಬೋರೆಗೌಡ(52) ಎಂದು ಗುರುತಿಸಲಾಗಿದೆ.
ಬೋರೆಗೌಡ ಅವರಿಗೆ ಪಿರಿಯಾಪಟ್ಟಣ ತಾಲ್ಲೂಕಿನ ಮತ ಎಣಿಕೆ ನಡೆಯುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.