ಚೆನ್ನೈ, ಡಿ.30 (DaijiworldNews/PY): ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಚೆನ್ನೈನಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾರಂಭದಲ್ಲಿ ಲಕ್ಷ್ಮಣ್ ಅವರು ಬಿಜೆಪಿ ಪಕ್ಷಕ್ಕೆ ಸೇರಿದರು.
ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ತಮ್ಮ 17ನೇ ವಯಸ್ಸಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. 1983ರಲ್ಲಿ ಮೊದಲ ಟೆಸ್ಟ್ ಆಡಿದ ಬಳಿಕ ಅವರಿಗೆ ತಂಡದಲ್ಲಿ ಹೆಚ್ಚಿನ ಅವಕಾಶಗಳು ದೊರೆತಿರಲಿಲ್ಲ. ಅವರು 1987ರಲ್ಲಿ ಕ್ರಿಕೆಟ್ನಿಂದ ನಿವೃತ್ತರಾದರು. ನಿವೃತ್ತಿಯ ಬಳಿಕ ಅವರು ಕ್ರಿಕೆಟ್ ವೀಕ್ಷಕ ವಿವರಣೆ ನೀಡಲು ಪ್ರಾರಂಭಿಸಿದ್ದರು.