ಮುಂಬೈ, ಡಿ.30 (DaijiworldNews/PY): ರೂಪಾಂತರಿ ಕೊರೊನಾ ಭೀತಿ ಆರಂಭವಾಗಿರುವ ಹಿನ್ನೆಲೆ ಸೋಂಕು ನಿಯಂತ್ರಿಸುವ ಸಲುವಾಗಿ 2021ರ ಜನವರಿ 31ರ ತನಕ ಮಹಾರಾಷ್ಟ್ರ ಸರ್ಕಾರ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ.
ಸಾಂದರ್ಭಿಕ ಚಿತ್ರ
ಈ ಬಗ್ಗೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದ್ದು, ಕೊರೊನಾ ವೈರಸ್ ವ್ಯಾಪಿಸುವುದು ಮಹಾರಾಷ್ಟ್ರ ರಾಜ್ಯಕ್ಕೆ ಅಪಾಯಕಾರಿಯಾಗಿದೆ. ಕೊರೊನಾ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರೆಯುತ್ತವೆ ಎಂದು ಹೇಳಿದೆ.
ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ರೂಪಾಂತರಿ ಕೊರೊನಾದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಈ ತೀರ್ಮಾನವನ್ನು ಕೈಗೊಂಡಿದೆ.
ಮಹಾರಾಷ್ಟ್ರ ಸರ್ಕಾರವು ಕಳೆದ ತಿಂಗಳುಗಳಿಂದ ಕೆಲ ವಲಯಗಳ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದ್ದು, ಕೆಲವು ತಿಂಗಳುಗಳ ಹಿಂದೆ ಧಾರ್ಮಿಕ ಸ್ಥಳಗಳಿಗೆ ತೆರಳಲು ಅನುಮತಿ ನೀಡಿತ್ತು.