ಬೆಂಗಳೂರು, ಡಿ.30 (DaijiworldNews/PY): ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.
1984ನೇ ಬ್ಯಾಚ್ ಐಎಎಸ್ ಅಧಿಕಾರಿ ರವಿಕುಮಾರ್ ಅವರನ್ನು ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ವಿಜಯ್ ಭಾಸ್ಕರ್ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಡಿಸೆಂಬರ್ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ವಿಜಯ್ ಭಾಸ್ಕರ್ ಅವರು ನಿವೃತ್ತಿ ಹೊಂದಲಿದ್ದಾರೆ.
ರವಿ ಕುಮಾರ್ ಅವರು ಸೇನಾ ಹಿರಿತನದೊಂದಿಗೆ ಆಡಳಿತಾಧಿಕಾರಿಯಾಗಿ ಉತ್ತಮ ಗೌರವ, ಸ್ಥಾನಮಾನ, ವಿಶ್ವಾಸಗಳಿಸಿಕೊಂಡಿದ್ದಾರೆ.
ಪ್ರಸ್ತುತ ಅವರು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.