ಕೋಲ್ಕತ್ತ,ಡಿ.30 (DaijiworldNews/HR): ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಸಂವಿಧಾನಕ್ಕೆ ವಿರುದ್ಧವಾದ ಕೆಲಸವನ್ನು ಮಾಡುತ್ತಿದ್ದು, ತಕ್ಷಣ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತೃಣಮೂಲ ಕಾಂಗ್ರೆಸ್ ಮನವಿ ಮಾಡಿದೆ.
ಈ ಸಂಬಂಧ ಟಿಎಂಸಿ ಸಂಸದರ ತಂಡವು ರಾಷ್ಟ್ರಪತಿಗೆ ಪತ್ರ ಬರೆದಿದ್ದು, "ರಾಜ್ಯಪಾಲರು ಸಾಂವಿಧಾನಿಕ ಉಲ್ಲಂಘನೆ ಮಾಡಿದ್ದು, ಅವರ ವಿರುದ್ಧ ಸಂವಿಧಾನದ 156(1) ವಿಧಿ ಅನುಸಾರ ಕ್ರಮಕೈಗೊಳ್ಳಬೇಕು" ಎಂದು ಪತ್ರದಲ್ಲಿ ತಿಳಿಸಲಾಗಿದೆ ಎಂದು ಸಂಸದ ಸುಕೇಂದು ಶೇಖರ್ ರಾಯ್ ತಿಳಿಸಿದ್ದಾರೆ.
ಇನ್ನು ಜಗದೀಪ್ ಧನ್ಕರ್ ಅವರು ಜುಲೈ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡ ದಿನದಿಂದ ಸರ್ಕಾರದ ಆಡಳಿತ, ಸಚಿವರು, ಅಧಿಕಾರಿಗಳ ವಿರುದ್ಧ ಟ್ವಿಟರ್ ಹಾಗೂ ಮಾಧ್ಯಮಗಳಲ್ಲಿ,ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.