ನವದೆಹಲಿ, ಡಿ.31 (DaijiworldNews/PY): ಹೊಸ ವರ್ಷಾಚರಣೆ ನಿರ್ಬಂಧಿಸಲು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿರುವ ಕಾರಣ ದೆಹಲಿಯಲ್ಲಿ ಗುರುವಾರ ಹಾಗೂ ಶುಕ್ರವಾರ ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ.
ದೇಶದಾದ್ಯಂತ 20 ರೂಪಾಂತರಿ ಕೊರೊನಾ ಪ್ರಕರಣಗಳು ಪತ್ತೆಯಾದ ಕಾರಣ ಹೊಸ ವರ್ಷಾಚರಣೆಯನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ತೀರ್ಮಾ ಮಾಡಿದೆ.
ಡಿಸೆಂಬರ್ 31 ರ ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6 ರಿಂದ ಜನವರಿ 1 ರ ರಾತ್ರಿ 11 ರಿಂದ ಜನವರಿ 2 ರ ಬೆಳಿಗ್ಗೆ 6 ರವರೆಗೆ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮ, ಸಭೆ, ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭಗಳಿಗೆ ಅವಕಾಶವಿಲ್ಲ ಎಂಬುದಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.