ಬೆಂಗಳೂರು,ಡಿ.31(DaijiworldNews/HR): ರಾಜ್ಯದಲ್ಲಿ ಡಿಸೆಂಬರ್ 31ರಂದು ಮಧ್ಯಾಹ್ನ 12 ಗಂಟೆಯಿಂದ ಶುಕ್ರವಾರ ಬೆಳಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,"ರೂಪಾಂತರ ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ವೇಳೆ ಜನರು ಸಹಕರಿಸಬೇಕು" ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಸಾರ್ವಜನಿಕರೆಲ್ಲರೂ ಕೂಡ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.