ಬೆಂಗಳೂರು,ಡಿ.31(DaijiworldNews/HR): "ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದಿನ ಎರಡೂವರೆ ವರ್ಷ ನಾನೇ ಇರುತ್ತೇನೆ, ಒಂದೂವರೆ ವರ್ಷ ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿದ್ದೇನೆ ಹಾಗಾಗಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬಂದು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ" ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ನಾಯಕತ್ವ ಗೊಂದಲ ಕೇವಲ ಮಾಧ್ಯಮ ಸೃಷ್ಟಿಯಷ್ಟೆ, ಒಂದೆರಡು ಶಾಸಕರಲ್ಲಿ ಬೇಸರ ಇರಬಹುದು ಹಾಗಾಗಿ ಅವರೊಂದಿಗೆ ಮಾತನಾಡಿ ಸರಿಪಡಿಸಲಾಗುವುದು ಅದಕ್ಕಾಗಿಯೇ ಸಭೆ ಕೂಡ ಕರೆದಿದ್ದೇನೆ" ಎಂದರು.
ಇನ್ನು "ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶೇ.60 ರಷ್ಟು ಗೆಲುವು ದಾಖಲಿಸಿದ್ದು, ಬಿಜೆಪಿ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ರೈತರ ಅಭಿವೃದ್ಧಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ನಾವು ರೂಪಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಕ್ರಮ ಕೈಗೊಂಡಿದ್ದೇವೆ" ಎಂದು ಹೇಳಿದ್ದಾರೆ.