ಭುವನೇಶ್ವರ, ಡಿ.31 (DaijiworldNews/PY): "ರೂಪಾಂತರಿ ಕೊರೊನಾ ಹಿನ್ನೆಲೆ ಹೊಸ ವರ್ಷಾಚರಣೆ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಒಂದೆಡೆ ಸೇರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ" ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ವಿಶೇಷ ಪರಿಹಾರ ಆಯುಕ್ತ ಪಿ ಕೆ ಜೆನಾ ಅವರು, "ರಾಜ್ಯದಾದ್ಯಂತ ಗುರುವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ಬೆಳಗ್ಗೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸಂದರ್ಭ ಅಗತ್ಯ ಸೇವೆಗಳಿಗೆ ಅನಮತಿ ಕಲ್ಪಿಸಲಾಗಿದೆ" ಎಂದಿದ್ದಾರೆ.
"ರಾಜ್ಯಾದ್ಯಂತ ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ಬೆಳಗ್ಗೆ 5 ಗಂಟೆಯ ತನಕ ರಾತ್ರಿ ಕರ್ಫ್ಯೂ ಜಾರಿ ಮಾಡಲಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು. ಕರ್ಫ್ಯೂ ವೇಳೆ ಎಲ್ಲಾ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ" ಎಂದು ಟ್ವೀಟ್ ಮುಖೇನ ತಿಳಿಸಿದ್ದಾರೆ.