ನವದೆಹಲಿ,ಜ.01 (DaijiworldNews/HR): ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೊಸ ವರ್ಷದ ಶುಭಾಶಗಳನ್ನು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , "2021 ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಗೆಲುವು ಸಾಧಿಸಲಿ" ಎಂದು ಶುಭ ಹಾರೈಸಿದ್ದಾರೆ.
ಇನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ, "ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು! ಹೊಸ ವರ್ಷವು ಹೊಸ ಆರಂಭವನ್ನು ಮಾಡಲು ವೈಯಕ್ತಿಕ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಅವಕಾಶ ಒದಗಿಸುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.