ದೆಹಲಿ, ಜ.01 (DaijiworldNews/HR): ದೆಹಲಿಯ ಸಿಂಘು ಗಡಿಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಕೊರೆಯ ಚಳಿಯನ್ನೂ ಲೆಕ್ಕಿಸದೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಸಿಂಘು ಗಡಿ ಪ್ರದೇಶದಲ್ಲಿ 1.1 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದ್ದು, ಇದು ಹದಿನೈದು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನವಾಗಿದ್ದು, ಕೊರೆಯುವ ಚಳಿಯಲ್ಲೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಇನ್ನು ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಹಾಗೂ ಕನಿಷ್ಠ ಬೆಂಬಲ ಬೆಲೆ ಕುರಿತು ಖಾತರಿ ನೀಡುವಂತಹ ವಿಚಾರದಲ್ಲಿ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಒಮ್ಮತ ಮೂಡಲಿಲ್ಲ ಎನ್ನಲಾಗಿದೆ.