ಕೊಲ್ಲಂ, ಜ.01 (DaijiworldNews/HR): ಗ್ರಾಮ ಪಂಚಾಯತಿಯಲ್ಲಿ ಅರೆ ಕಾಲಿಕ ಕಸಗುಡಿಸುವ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಆನಂದವಲ್ಲಿ (46) ಅದೇ ಪಂಚಾಯತಿಗೆ ಇದೀಗ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಸಿಪಿಐ(ಎಂ) ಸದಸ್ಯೆಯಾಗಿರುವ ಆನಂದವಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಥನಪುರಂ ಬ್ಲಾಕ್ ಪಂಚಾಯಿತಿಗೆ ತಲವೂರು ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದರು.
13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಪಕ್ಷ 7 ಸ್ಥಾನಗಳನ್ನು ಪಡೆದಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಯ ಮಹಿಳೆಗೆ ಮೀಸಲಾಗಿದ್ದ ಕಾರಣ, ಪಕ್ಷ ಆನಂದವಲ್ಲಿ ಅವರ ಹೆಸರನ್ನು ಸೂಚಿಸಿತು.
ಇನ್ನು ಪಂಚಾಯಿತಿಯಲ್ಲಿ ನಡೆದ ನೂತನ ಸದಸ್ಯರ ಸಭೆಯಲ್ಲಿ ಆನಂದವಲ್ಲಿಯವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 30ರಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ಅವರ ಪತಿ ಮೋಹನ್ ಪಕ್ಷದ ಸ್ಥಳೀಯ ಸಮಿತಿ ಸದಸ್ಯರಾಗಿದ್ದಾರೆ.