ನವದೆಹಲಿ, ಜ.01 (DaijiworldNews/PY): ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ಆರೋಗ್ಯದ ಸಮಯದಲ್ಲಿ ನನಗಾಗಿ ಶುಭ ಹಾರೈಸಿದ, ಪ್ರಾರ್ಥಿಸಿದ ಹಾಗೂ ನೈತಿನ ಬೆಂಬಲ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ನನ್ನ ಕುಟುಂಬದ ಸದಸ್ಯರು ಹಾಗೂ ನಾನು ಕೊರೊನಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇವೆ. ಈ ಸವಾಲಿನ ಸಮಯದಲ್ಲಿ ನನಗೆ ಆರೈಕೆ ನೀಡಿದ ಡಾ.ರಣದೀಪ್ ಗುಲೇರಿಯಾ, ದಿರ್ ಏಮ್ಸ್ ಹಾಗೂ ಅವರ ತಂಡಕ್ಕೆ ಹೃತ್ಪೂರ್ವಕವಾದ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಹೊಸ ವರ್ಷದ ಶುಭಾಶಯ ತಿಳಿಸಿದ ಅವರು, "ನಿಮಗೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.
ಡಿಸೆಂಬರ್ ಎರಡನೇ ವಾರದಲ್ಲಿ ಜೆ.ಪಿ.ನಡ್ಡಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮೊಂದಿಗೆ ಸಂಪರ್ಕ ಬಂದವರು ಮನೆಯಲ್ಲಿರುವಂತೆ ಮನವಿ ಮಾಡಿದ್ದರು.