ಬೆಂಗಳೂರು,ಜ.01 (DaijiworldNews/HR): ಕರ್ನಾಟಕದ ವಿವಿಧೆಡೆಗಳಲ್ಲಿ ಚಾಲನೆ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತಾನಾಡಿದ ಅವರು, "ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಭೆ ಹಾಗೂ ಪಾಲಿಕೆಗಳು, ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು" ಎಂದು ಹೇಳಿದ್ದಾರೆ.
ಇನ್ನು ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರಕ್ಕೆ ಬೆನ್ನೆಲುಬಾಗಿ ನಿಲ್ಲುವುದಾಗಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮುಖ್ಯಮಂತ್ರಿಯವರಿಗೆ ಈ ವೇಳೆ ಭರವಸೆ ನೀಡಿದ್ದಾರೆ.