ಮಂಗಳೂರು, ಜ. 01 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶುಕ್ರವಾರ 27 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 32,911ಕ್ಕೆ ಏರಿಕೆಯಾಗಿದೆ. ಈ ಪೈಕಿ 349 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 4,84,106 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,51,195 ಮಂದಿಯ ವರದಿ ನೆಗೆಟಿವ್ ಆಗಿದೆ. ಶುಕ್ರವಾರ 46 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,830ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಶುಕ್ರವಾರ 14 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,073ಕ್ಕೆ ಏರಿಕೆಯಾಗಿದೆ. ಈ ಪೈಕಿ 82 ಪ್ರಕರಣಗಳು ಪ್ರಸ್ತುತ ಸಕ್ರೀಯವಾಗಿವೆ.
ಈವರೆಗೆ 2,87,113 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,64,040 ಮಾದರಿಗಳು ನಕಾರಾತ್ಮಕವಾಗಿವೆ. ಶುಕ್ರವಾರ ಆರು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,803 ಕ್ಕೆ ಏರಿದೆ.
ಈವರೆಗೆ ಒಟ್ಟು 188 ಸಾವುಗಳು ಸಂಭವಿಸಿವೆ.