ಜಮ್ಮು, ಜ.02 (DaijiworldNews/HR): ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿ ಹಾಗೂ ಶೆಲ್ಲಿಂಗ್ನಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದಿದೆ.
ಹುತಾತ್ಮರಾದ ಯೋಧನನ್ನು ಸುಬೇದಾರ್ ರವೀಂದರ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ 3.30ರ ವೇಳೆಗೆ ಹಾಗೂ ಸಂಜೆ 5.30ರ ವೇಳೆಗೆ ನೌಶೇರಾ ವಲಯದಲ್ಲಿ ಪಾಕಿಸ್ತಾನದ ಯೋಧರು ಗುಂಡಿನ ದಾಳಿ ನಡೆಸಿದ್ದು, ಈ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ. ಗುಂಡಿನ ದಾಳಿಯಲ್ಲಿ ರವೀಂದರ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಸೇನಾ ವಕ್ತಾರರೊಬ್ಬರು ಹೇಳಿದ್ದಾರೆ.
2020ರಲ್ಲಿ ಎಲ್ಒಸಿಯಲ್ಲಿ ಪಾಕಿಸ್ತಾನವು 5,100 ಬಾರಿ ಕದನವಿರಾಮ ಉಲ್ಲಂಘಿಸಿದ್ದು, ಇದು ಕಳೆದ 18 ವರ್ಷದಲ್ಲೇ ಅತ್ಯಧಿಕವಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.