ಉಡುಪಿ, ಜ.02 (DaijiworldNews/PY): ಸ್ಕೂಟರ್ ಹಾಗೂ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮಲ್ಪೆಯ ತೊಟ್ಟಂ ಬಳಿ ನಡೆದಿದೆ.
ಮೃತರನ್ನು ಹೂಡೆ ನಿವಾಸಿ ಐಸಾಕ್ ಎಂದು ಗುರುತಿಸಲಾಗಿದೆ.
ಹೂಡೆಯಿಂದ ಮಲ್ಪೆ ಕಡೆಗೆ ಬರುತ್ತಿದ್ದ ಸ್ಕೂಟರ್ಗೆ ಎದುರಿನಿಂದ ಬಂದ ಮೀನಿನ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಐಸಾಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.